Jannah Theme License is not validated, Go to the theme options page to validate the license, You need a single license for each domain name.
BREAKING NEWSCITY CRIME NEWSDHARWADTWINCITY

ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ವಿಬಿ ತಳವಾರ ನಿಧನ!

VB TALAWAR

POWER CITYNEWS : HUBLI

ಹುಬ್ಬಳ್ಳಿ : ನಿವೃತ್ತ ಪೊಲೀಸ್ ಅಧಿಕಾರಿಯಾದ ವೀರಭದ್ರಪ್ಪ ಬಸಪ್ಪ‌ ತಳವಾರ (78) ತಮ್ಮ ಸ್ವ ಗೃಹದಲ್ಲಿ ಇಂದು‌ ಬೆಳಗಿನ ಜಾವ ನಿಧನರಾಗಿದ್ದಾರೆ.

ಅವಳಿನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕರ್ತವ್ಯದಿಂದ ನಿವೃತ್ತಿ ಹೊಂದಿದ್ದರು. ಕಳೆದ ಹಲವು ವರ್ಷಗಳಿಂದ ಗೋಕುಲ ರಸ್ತೆಯ ಬಸವೇಶ್ವರ ನಗರದಲ್ಲಿನ ಲಕ್ಷ್ಮೀ ಲೇಔಟ್ ನಲ್ಲಿ ಕುಟುಂಬದೊಂದಿಗೆ ವಿಶ್ರಾಂತ ಜೀವ ನಡೆಸುತ್ತಿದ್ದರು ಎನ್ನಲಾಗಿದೆ.
ಆದರೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇನ್ನೂ ಮೃತರ ಆತ್ಮಕ್ಕೆ ಚೀರ ಶಾಂತಿ ಕೋರಿ “ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ” ಸಂತಾಪ ಸೂಚಿಸಿದೆ.

Related Articles

Leave a Reply

Your email address will not be published. Required fields are marked *