ಬಸ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ನಂದಿ ಹೈವೆಯಲ್ಲಿ ಜವರಾಯನ ಅಟ್ಟಹಾಸ!
ಹುಬ್ಬಳ್ಳಿ Exclusive
ಹುಬ್ಬಳ್ಳಿ: ಮೊನ್ನೇಯಷ್ಟೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತ ಮಾಸುವ ಮುನ್ನವೆ ಇಂದು ತಡ ರಾತ್ರಿ ಹುಬ್ಬಳ್ಳಿಯ ರಾಯ್ನಾಳ್ ಬೈಪಾಸ್ ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಹು-ಧಾ ನಂದಿ ಹೈವೆ ನಲ್ಲಿ ರಾಯ್ನಾಳ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಲಾರಿಯ ನಡುವೆ ಮುಖಾ-ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಬಸ್ ನಲ್ಲಿದ್ದ 20ಕ್ಕೂ ಹೆಚ್ಚಿನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಕೊಲ್ಲಾಪುರದಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಪುಣೆ ಕಡೆ ಹೊರಟಿದ್ದ ಸರಕು ಸಾಗಣೆಯ ಲಾರಿಯ ನಡುವೆ ಅಪಘಾತ ಸಂಭವಿಸಿದೆ.
ಇನ್ನೂ ಬಸ್ ಚಾಲಕ ಟ್ರ್ಯಾಕ್ಟರ್ ಹಿಂದಿಕ್ಕುವ ವೇಳೆ ಎದುರಿನಿಂದ ಬಂದ ಸರಕು ಹೊತ್ತ ಲಾರಿಯ ನಡುವೆ ಅವಘಡ ಸಂಭವಿಸಿದೆ.
ಅಪಘಾತ ಸಂಭವಿಸುತ್ತಿದ್ದ ಹಾಗೇ ಹೈ ವೇ ಹೆದ್ದಾರಿ ಬಂದ್ ಆಗಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಆಯುಕ್ತ ಲಾಬುರಾಮ್ ಅಪಘಾತದಲ್ಲಿ ಗಾಯಗೊಂಡ 26 ಜನರನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದು, ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು
ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಿ ತನಿಖೆಯನ್ನು ನಡೆಸುತ್ತಿದ್ದಾರೆ.