Jannah Theme License is not validated, Go to the theme options page to validate the license, You need a single license for each domain name.
Uncategorized

“ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರದ ಸ್ಪಂದನೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ!”

Dakhani

POWER CITYNEWS :ಸುದ್ದಿ ವಿಭಾಗ ಹುಬ್ಬಳ್ಳಿ/ನವದೆಹಲಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ರೈತ ಮುಖಂಡರು ಮತ್ತು ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಉಪಸ್ಥಿತಿಯಲ್ಲಿ ಕಬ್ಬು ಮತ್ತು ಸಕ್ಕರೆ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ವೇಸ್ಟೇಜ್‌ನಲ್ಲಿನ ವಂಚನೆ, ಕಬ್ಬಿನ ತೂಕದಲ್ಲಿನ ವ್ಯತ್ಯಾಸ, ಸಕ್ಕರೆ ಇಳುವರಿ (ರಿಕವರಿ) ಲೆಕ್ಕಾಚಾರದಲ್ಲಿನ ಅಕ್ರಮಗಳ ಆರೋಪಗಳು ಸೇರಿದಂತೆ ರೈತರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಇದರ ಜೊತೆಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP), SAP, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ, ಎಥನಾಲ್ ನೀತಿ ಸೇರಿದಂತೆ ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ

ರೈತ ಮುಖಂಡರು ಮಂಡಿಸಿದ ಬೇಡಿಕೆಗಳು ಹಾಗೂ ಸಲಹೆಗಳನ್ನು ಪರಿಗಣಿಸಿ, ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಲು ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಈ ಸಮಿತಿಯಲ್ಲಿ ಕೇಂದ್ರ ಕೃಷಿ ಸಚಿವಾಲಯದ ಅಧಿಕಾರಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರು ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು, ನ್ಯಾಯಯುತ ಬೆಲೆ ಖಚಿತಪಡಿಸುವುದು ಹಾಗೂ ಸಕ್ಕರೆ ಕ್ಷೇತ್ರದ ಸುಸ್ಥಿರ ಬೆಳವಣಿಗೆಗೆ ಕ್ರಮ ಕೈಗೊಳ್ಳುವುದು ಸಮಿತಿಯ ಪ್ರಮುಖ ಉದ್ದೇಶವಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಹಿತಾಸಕ್ತಿ ಮತ್ತು ಕಲ್ಯಾಣಕ್ಕೆ ಆದ್ಯತೆ ನೀಡಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಗಣ್ಯರ ಉಪಸ್ಥಿತಿ

ಸಭೆಯಲ್ಲಿ ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಸಚಿವ ಲಕ್ಷ್ಮಣ ಸವದಿ, ಕೃಷಿ ಇಲಾಖೆಯ ಸಚಿವ ನರೇಂದ್ರ ಸ್ವಾಮಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ರೈತ ಮುಖಂಡ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ, ಕೇಂದ್ರ ಕೃಷಿ ಸಚಿವಾಲಯದ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *