ಭೀಕರ ರಸ್ತೆ ಅಪಘಾತ ಮೂವರ ದುರ್ಮರಣ!
Accident @ anchatageri !

POWER CITYNEWS : HUBBALLI
ಹುಬ್ಬಳ್ಳಿ : ಖಾಸಗಿ ಸಾರಿಗೆ ಬಸ್ಸ ಹಾಗೂ ಫಾರ್ಚೂನರ್ ಕಾರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನಪ್ಪಿದರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿರುವ ಘಟನೆ, ಹುಬ್ಬಳ್ಳಿಯ ಅಂಚಟಗೇರಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಕಾರವಾರ ರಸ್ತೆಯ ಅಂಚಟಗೇರಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವನ ಕೈಗೆ ಗಂಭೀರ ಗಾಯವಾಗಿದೆ. ಮೃತರನ್ನು ತೆಲಂಗಾಣ ಜಿಲ್ಲೆಯ ಉಪ್ಪಲ್ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಇವರು ವೈಯಕ್ತಿಕ ಕೆಲಸದ ನಿಮಿತ್ತವಾಗಿ ರಾಜ್ಯಕ್ಕೆ ಬಂದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಫಾರ್ಚುನರ್ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್ಸಿನ ಮುಂಭಾಗ ಸಹಿತ ನಜ್ಜುಗುಜ್ಜಾಗಿದೆ.

ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೋಲಿಸರು ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮೃತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಗಾಯಗೊಂಡ ಸೀತಾರಾಮ ಪಲ್ಲೇ ಎಂಬಾತನಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಹೆಸರು ಪೊಲೀಸರ ಪ್ರಾಥಮಿಕ ತನಿಖೆಯ ನಂತರ ತಿಳಿದು ಬರಬೇಕಾಗಿದೆ.