DHARWADHubballiPolitical news

ಇದೆ19.ಕ್ಕೆ ಪಾಲಿಕೆಯ ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ!

HDMC ELECTION !

Click to Translate

POWERCITY NEWS : HUBBALLI

ಹುಬ್ಬಳ್ಳಿ ಅ.16: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಲೆಕ್ಕಗಳ ಸ್ಥಾಯಿ ಸಮಿತಿಯ ಒಟ್ಟು 7 ಸದಸ್ಯ ಸ್ಥಾನಗಳ ಪೈಕಿ ಖಾಲಿ ಇರುವ ಒಂದು ಸದಸ್ಯ ಸ್ಥಾನಕ್ಕೆ ಅಕ್ಟೋಬರ್ 19 ರಂದು ಚುನಾವಣೆ ನಡೆಯಲಿದೆ.

ಅಕ್ಟೋಬರ್ 19 ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಹುಬ್ಬಳ್ಳಿಯ ಮಹಾನಗರ ಪಾಲಿಕೆ ಸಭಾ ಭವನದಲ್ಲಿ ಲೆಕ್ಕಗಳ ಸ್ಥಾಯಿ ಸಮಿತಿಗೆ ಖಾಲಿ ಇರುವ ಒಂದು ಸ್ಥಾನಕ್ಕೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ನಿಯಮಾನುಸಾರ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ, ಮುಕ್ತಾಯಗೊಳಿಸಲಾಗುವುದೆಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಸ್.ಬಿ. ಶೆಟೆನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button