ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್‌ನ 7 ಬ್ಲಾಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭ..!
POWER

POWER CITY NEWS :ಹುಬ್ಬಳ್ಳಿ:
ನ.15ರಂದು ಎರಡು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ಸಭೆ..!
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಏಳು ಬ್ಲಾಕ್‌ಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಂಘಟನಾ ಸೃಜನ ಅಭಿಯಾನ-2ರ ಅಡಿಯಲ್ಲಿ ನವೆಂಬರ್ 15ರಂದು ಹುಬ್ಬಳ್ಳಿಯಲ್ಲಿ ಎರಡು ಹಂತಗಳಲ್ಲಿ ಸಭೆಗಳನ್ನು ಆಯೋಜಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ಆದೇಶದ ಮೇರೆಗೆ ಈ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಹುಬ್ಬಳ್ಳಿ-ಧಾರವಾಡ ಕೇಂದ್ರ-73 ಹಾಗೂ ಪೂರ್ವ-72 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಬ್ಲಾಕ್ ಸಮಿತಿಗಳ ಸಭೆ ನಡೆಸಿ ಅಧ್ಯಕ್ಷರ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
ಬೆಳಗ್ಗೆ 11:30ಕ್ಕೆ ಮೊದಲ ಸಭೆ
ಹುಬ್ಬಳ್ಳಿ-ಧಾರವಾಡ ಕೇಂದ್ರ-73 ವಿಧಾನಸಭಾ ಕ್ಷೇತ್ರದ ಉಣಕಲ್ ಬ್ಲಾಕ್ ಸಮಿತಿ ಹಾಗೂ ವಿದ್ಯಾನಗರ ಬ್ಲಾಕ್ ಸಮಿತಿಯ ಸಭೆ ನವೆಂಬರ್ 15ರ ಭಾನುವಾರ ಬೆಳಗ್ಗೆ 11:30ಕ್ಕೆ ನಡೆಯಲಿದೆ.
ಮಧ್ಯಾಹ್ನ 3:30ಕ್ಕೆ ಎರಡನೇ ಸಭೆ
ಹುಬ್ಬಳ್ಳಿ-ಧಾರವಾಡ ಪೂರ್ವ-72 ವಿಧಾನಸಭಾ ಕ್ಷೇತ್ರದ ಬಮ್ಮಾಪುರ ಬ್ಲಾಕ್ ಸಮಿತಿ ಹಾಗೂ ಇಂದಿರಾನಗರ ಬ್ಲಾಕ್ ಸಮಿತಿಯ ಸಭೆ ಅದೇ ದಿನ ಮಧ್ಯಾಹ್ನ 3:30ಕ್ಕೆ ನಡೆಯಲಿದೆ.
ಎರಡೂ ಸಭೆಗಳು ಹುಬ್ಬಳ್ಳಿಯ ಸರ್ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ, ಲ್ಯಾಮಿಂಗ್ಟನ್ ಶಾಲೆಯ ಎದುರಿನ ಕಾಂಗ್ರೆಸ್ ಭವನದಲ್ಲಿ ಜರುಗಲಿವೆ.
ಸಂಘಟನಾ ಸೃಜನ ಅಭಿಯಾನ-2ರ ಭಾಗವಾಗಿ ನಡೆಯುತ್ತಿರುವ ಈ ಸಭೆಗಳಲ್ಲಿ ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸದಾನಂದ ವಿ. ಡಂಗನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
POWER CITY NEWS



