ಪಕ್ಷದ ನಾಯಕರ ಭಿನ್ನಾಭಿಪ್ರಾಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ ಎಂದ ಲಾಡ್!
political news

POWER CITY NEWS : HUBBALLI ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತ ಸಚಿವ ಸತೀಶ ಜಾರಕಿಹೊಳಿ ಅವರ ಹೇಳಿಕೆ ವೈಯಕ್ತಿಕವಾದದ್ದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಎಂದರು. ಸಚಿವ ಆರ್.ಬಿ.ತಿಮ್ಮಾಪುರ ಅವರ ದಲಿತ ಸಿ.ಎಂ ಹೇಳಿಕೆ ಕುರಿತು, ವೈಯಕ್ತಿಕ ಅಭಿಪ್ರಾಯಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ.
ಕಾಂಗ್ರೆಸ್ ಪಕ್ಷ ದಲಿತರು, ಶೋಷಿತರ ಪರವಾಗಿದೆ ಎಂದರು.
ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಯಿಸಿ, ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಇರುವ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು ಎಂಬುದನ್ನು ಅವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದರು.
ಶುಕ್ರವಾರದಂದು ತಪ್ಪಿಯೂ ಈ ಕೆಲಸಗಳನ್ನು ಮಾಡದಿರಿ..! ಲಕ್ಷ್ಮೀ ಮುನಿಯುವುದು ಗ್ಯಾರೆಂಟಿ
ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಕ್ಕೆ ಹೋದರೆ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜತೆಗೆ ಹೋಗುವುದಿಲ್ಲ. ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸುವುದಿಲ್ಲ ಎಂದು ಹೇಳಿದರು. 21ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಅದರ ಪೂರ್ವಭಾವಿ ಸಭೆ ಹುಬ್ಬಳ್ಳಿಯಲ್ಲಿ ಶೀಘ್ರ ನಡೆಯಲಿದೆ ಎಂದು ಹೇಳಿದರು.
