
POWER CITYNEWS : hubballi
ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹೊಸ್ತಿಲದಲ್ಲಿರುವಾಗಲೇ ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೆಗೌಡರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಪಕ್ಷದ ಮುಖಂಡ ಮರಿತಿಬ್ಬೇಗೌಡರವರು ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆಯನ್ನು ಲಿಖಿತ ಮೂಲಕ ನೀಡಿದರು.
ಹುಬ್ಬಳ್ಳಿಯ ಸಭಾಪತಿ ಬಸವರಾಜ್ ಹೊರಟ್ಟಿಯವರ ಗೃಹ ಕಚೇರಿಗೆ ಆಗಮಿಸಿದ ಜೆಡಿಎಸ್ ಪರಿಷತ್ ಸದಸ್ಯ ಮರಿತಿಬ್ಬೇಗೌಡರವರು ಸಭಾಪತಿಗಳಿಗೆ ರಾಜೀನಾಮೆ ಪತ್ರವನ್ನು ನೀಡಿದ್ದರು. ಇನ್ನೂ ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿ, ಮರಿತಿಬ್ಬೇಗೌಡ ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನೂ ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
