ಕಲ್ಬುರ್ಗಿರಾಜಕೀಯರಾಜ್ಯಸ್ಥಳೀಯ ಸುದ್ದಿ

ಆತನೂರು ಗ್ರಾ.ಪಂ.ಅಧ್ಯಕ್ಷ ಸ್ಥಾನಕ್ಕೆ:ಶೋಭಾ ಪಾಟೀಲ!

ಕಲಬುರ್ಗಿ

ಅಫಜಲಪುರ: ಆತನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಶ್ರೀಮತಿ ಶೋಭಾ ಗುರುನಗೌಡ ಪಾಟೀಲ್ ಕೇವಲ ಒಂದು ಮತದ ಅಂತರದಿಂದ ಗೆಲ್ಲುವ ಮೂಲಕ ಆತನೂರು ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷ ಸ್ಥಾನ ಮೂಡಿಗೆರಿಸಿಕೊಂಡಿದ್ದಾರೆ. ಇದರಿಂದ ಆತನೂರು ಅಧ್ಯಕ್ಷ ಸ್ಥಾನ ಬಿಜೆಪಿಯು ಪಾಲಾಗಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಗ್ರಾಮ ಪಂಚಾಯ್ತಿ ಆದ್ಯಕ್ಷೆ ಶ್ರೀಮತಿ ಶೋಭಾ ಅವರು ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಮ್ಮ ತಾಲ್ಲೂಕಿನಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಜನರ ಆಶಯದಂತೆ ಇಲ್ಲೀನ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವ ಕಾರ್ಯವನ್ನು ಸಂಭಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು.ಮತ್ತು ಮುಂಬರುವ 2023 ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಬಲವರ್ಧನೆಗೆ ಒತ್ತು ನೀಡುವ ಮೂಲಕ ಜನರ ಮನಗೆಲ್ಲುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ!

ಇದೆ ವೇಳೆ ಶ್ರೀ ಮತಿ ಶೋಭಾ ಪಾಟೀಲರ ಪತಿ ಗುರುನಗೌಡ ಪಾಟೀಲ ಮಾತನಾಡಿ ಬಿಜೆಪಿಯ ಮಾಜಿ ಶಾಸಕರಾದ ಮಾಲಿಕಯ್ಯ ಗುತ್ತೇದಾರ ಅವರ ಬೆಂಬಲ ಅಪಾರವಿದ್ದು ಆತನೂರು ಪಂಚಾಯ್ತಿ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ನೀಡಿದ ಮಾರ್ಗದರ್ಶನ ಫಲಿಸಿದೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button