BREAKING NEWSMANGALURUSports

ಕ್ಯಾ.ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ!

MEDIA CRICKET!

POWER CITYNEWS : HUBBALLI

ಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ (ಪೆವಿಲಿಯನ್ )‌ಸ್ಮರಣೆ ಯೊಂದಿಗೆ ನಡೆಯಲಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸುದ್ದಿ ಗೋಷ್ಠಿ
ಯಲ್ಲಿಂದು ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ 25 ಕ್ಕೂ ಅಧಿಕ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಪಂದ್ಯಾಟದ ಲಾಂಛನವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಳಗಾವಿಯಲ್ಲಿ ಅನಾವರಣ ಗೊಳಿಸಿದ್ದಾರೆ.
ಜ.5ರಂದು ಸಂಜೆ 5.30 ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಎಸ್ ಸಿಡಿಸಿಸಿ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್, ರೋಹನ್ ಕಾರ್ಪೊರೇಶನ್ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಮತ್ತಿತರರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ
ಕ್ರೀಡಾ ಸಚಿವ ನಾಗೇಂದ್ರ , ವಸತಿ ಸಚಿವ ಜಮೀರ್ ಅಹಮದ್ ಖಾನ್,ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು.
‌ಸುದ್ದಿ ಗೋಷ್ಠಿಯಲ್ಲಿ ಶಿವಾನಂದ ತಗಡೂರು ಅಧ್ಯಕ್ಷ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ
ಶ್ರೀನಿವಾಸ ಇಂದಾಜೆ ಅಧ್ಯಕ್ಷ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ
ಪಿ.ಬಿ.ಹರೀಶ್ ರೈ ಅಧ್ಯಕ್ಷ, ಮಂಗಳೂರು ಪ್ರೆಸ್ ಕ್ಲಬ್.ರಾಮಕೃಷ್ಣ ಅಧ್ಯಕ್ಷ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ‌ ರಾಜ್ಯ ಸಮಿತಿ ಸದಸ್ಯ, ಪತ್ರಕರ್ತರ ಸಂಘ ರವೀಂದ್ರ ಶೆಟ್ಟಿ , ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button