BREAKING NEWSCITY CRIME NEWSDHARWADPolice
ಆ.4ರಂದು PG CET ಪರೀಕ್ಷೆ :ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ!
Dakhani

POWER CITYNEWS: HUBLI ಹುಬ್ಬಳ್ಳಿ ಆ.2: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಗಸ್ಟ್ 4 ರಂದು ನಡೆಸಲಿರುವ ಪಿಜಿ ಸಿಇಟಿ ಪರೀಕ್ಷೆಗೆ ಧಾರವಾಡ ನಗರದಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಮತ್ತು ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಮಾಡಲು ಆದೇಶಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶಿಸಲಾಗಿದೆ ಎಂದು ಉಪ ಪೊಲೀಸ ಆಯುಕ್ತರಾದ ಮಹಾನಿಂಗ ನಂದಗಾವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
