BREAKING NEWSCITY CRIME NEWSHubballiL&TTWINCITYಸ್ಥಳೀಯ ಸುದ್ದಿಹುಬ್ಬಳ್ಳಿ

ಗ್ಯಾಸ್ ಬೆಲೆ ಏರಿಕೆಗೆ ಕೆಂಡಾಮಂಡಲ; ರಸ್ತೆ ಮಧ್ಯದಲ್ಲೇ ಒಲೆ ಹೂಡಿ ಮಹಿಳಾ ಕಾಂಗ್ರೆಸ್ ಆಕ್ರೋಶ!

Power CityNews

POWER CITYNEWS:HUBBALLI/ಹುಬ್ಬಳ್ಳಿ:* ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಉಣಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಧಾರವಾಡ ಮತ್ತು ಹುಬ್ಬಳ್ಳಿ ನಡುವೆ ಇರುವ ಗೋಪನಕೊಪ್ಪ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಮಧ್ಯದಲ್ಲೇ ಅಡುಗೆ ಮಾಡಿ ಆಕ್ರೋಶ!*
ಪ್ರತಿಭಟನೆಯ ಭಾಗವಾಗಿ ಮಹಿಳಾ ಕಾರ್ಯಕರ್ತೆಯರು ರಸ್ತೆ ಮಧ್ಯದಲ್ಲೇ ಒಲೆ ಹೂಡಿ, ಅಡುಗೆ ಮಾಡುವ ಮೂಲಕ ವಿನೂತನವಾಗಿ ತಮ್ಮ ಆಪ್ರತಿರೋಧವನ್ನು ದಾಖಲಿಸಿದರು. ದಿನೇ ದಿನೇ ಏರುತ್ತಿರುವ ಎಲ್‌ಪಿಜಿ ಗ್ಯಾಸ್ ಬೆಲೆಯಿಂದಾಗಿ ಸಾಮಾನ್ಯ ಜನರಿಗೆ ಬದುಕು ನಡೆಸುವುದು ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಉದ್ಯಮಿಗಳು, ಸಾರ್ವಜನಿಕರ ಬದುಕು ದುಸ್ತರ!*

ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ತಕ್ಷಣವೇ ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಬೇಕೆಂದು ಆಗ್ರಹಿಸಿದರು. ಈ ಬೃಹತ್ ಪ್ರತಿಭಟನೆಯಲ್ಲಿ ಉಣಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ನೂರಾರು ಮಹಿಳಾ ಕಾರ್ಯಕರ್ತೆಯರು ಸಕ್ರಿಯವಾಗಿ ಭಾಗವಹಿಸಿದ್ದರು.

“ಕೇಂದ್ರ ಸರ್ಕಾರದ ತಪ್ಪು ನೀತಿಗಳು ಮತ್ತು ಆಡಳಿತ ವೈಫಲ್ಯದಿಂದಾಗಿ ದೇಶದ ಕೋಟ್ಯಂತರ ಭಾರತೀಯರ ಹಾಗೂ ಹೋಟೆಲ್ ಉದ್ಯಮಿಗಳ ಜೀವನ ಬೀದಿಗೆ ಬರುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ,” ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *