Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

RTO ಚೆಕಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ವಿಜಯಪುರ

ವಿಜಯಪೂರ ಜಿಲ್ಲೆಯ ಚಡಚಣ ತಾಲ್ಲೂಕಿನ ಧೂಳಖೇಡ RTO ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ನಡೆದಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ್ RTO ಚೆಕ್ ಪೋಸ್ಟ್‌ನಲ್ಲಿ ಲೋಕಾಯುಕ್ತ ಎಸ್ಪಿ ಅನಿತಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಧೂಳಖೇಡ ಚೆಕ್ ಪೋಸ್ಟ್‌ನಲ್ಲಿ ಸಂಗ್ರಹವಾಗಿದ್ದ 3 ರಿಂದ 4 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದು,
ಪ್ರಮುಖ ದಾಖಲೆಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ಮಾಡುತ್ತಿದ್ದಾರೆ.

ಅಲ್ಲದೇ, 7-8 ಹೋಮ್ ಗಾರ್ಡ್‌ಗಳ ವಿಚಾರಣೆ ಹಾಗೂ ಅಗತ್ಯ ದಾಖಲೆ, ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಮಾಡುತ್ತಿದ್ದು, ಅಕ್ರಮದಲ್ಲಿ ಭಾಗಿಯಾದವರಿಗೆ ನಡುಕ ಶುರುವಾಗಿದೆ.

Related Articles

Leave a Reply

Your email address will not be published. Required fields are marked *