BREAKING NEWSDHARWADHubballiPolitical news

“ಗ್ಯಾರಂಟಿ” ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ವಿನಯ್ ಕುಲಕರ್ಣಿ?

Vinaykulkarni

POWER CITYNEWS : HUBLI

ಹುಬ್ಬಳ್ಳಿ : ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ 72- ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಮತ್ತು 73- ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರಗಳ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶವನ್ನು ಫೆಬ್ರವರಿ 3 ರಂದು ಸಂಜೆ 4.30 ಗಂಟೆಗೆ ರೈಲ್ವೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ. ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆಯನ್ನು ವಹಿಸುವರು.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ವಿನಯ ಕುಲಕರ್ಣಿ, ವಾಯುವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಜೆ.ಎಂ.ಗಣೇಶ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Articles

Leave a Reply

Your email address will not be published. Required fields are marked *

Back to top button