armybangaluruBREAKING NEWSCITY CRIME NEWSLife StyleLokasabaPoliceRainTWINCITYರಾಜಕೀಯರಾಜ್ಯ

ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶಹಿಂಪಡೆದ ರಾಜ್ಯ ಸರ್ಕಾರ..!

newsbuero

POWEER CITY NEWS:BANGALURU/ಬೆಂಗಳೂರು: ನಗರದ ಚಿನ್ನಸ್ವಾಮಿ ಮೈದಾನದ ಗೇಟ್ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ (Bengaluru stampede) ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಇ ವೇಳೆ ಕರ್ತವ್ಯ ಲೋಪ ಆರೋಪದಲ್ಲಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌, ಡಿಸಿಪಿ ಶೇಖರ್ ಎಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್‌ಪೆಕ್ಟರ್​ ಗಿರೀಶ್​ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಆದರೆ ಇದೀಗ ಈ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಹೌದು ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅಮಾನತು(suspend) ಮಾಡಿದ್ದರಿಂದ ರಾಜ್ಯ ಸರ್ಕಾರದ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಇದೀಗ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.

ಕಳೆದ ಜೂನ್‌ 4ರಂದು ನಡೆದ ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಆದೇಶಿಸಿತ್ತು. ಘಟನೆಯ ಕುರಿತು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಜಗದೀಶ್ ಜಿ. ಅವರು ತನಿಖೆ ನಡೆಸಿದ್ದರು. ಇದಲ್ಲದೆ, ಹೈಕೋರ್ಟ್‌ನ(highcourt) ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಿತ್ತು.

ನ್ಯಾಯಾಂಗ ಆಯೋಗ ಮತ್ತು ಮ್ಯಾಜಿಸ್ಟೀರಿಯಲ್(magistrate) ಸಮಿತಿ ತನಿಖೆಯನ್ನು ಪೂರ್ಣಗೊಳಿಸಿ, ಕ್ರಮವಾಗಿ ಜುಲೈ 10 ಮತ್ತು 11 ಸರ್ಕಾರಕ್ಕೆ ವರದಿ ಸಲ್ಲಿಸಿದ್ದವು. ಇದಲ್ಲದೆ, ಅಧಿಕಾರಿಗಳು ತಮ್ಮ ಅಮಾನತ್ತನ್ನು ರದ್ದುಗೊಳಿಸುವಂತೆ ಕೋರಿದ್ದರು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಮರು ಪರಿಶೀಲನೆ ಬಳಿಕ ಅಧಿಕಾರಿಗಳ ಅಮಾನತು ಆದೇಶವನ್ನು (stategovt)ರಾಜ್ಯ ಸರ್ಕಾರ ಹಿಂಪಡೆದಿದೆ.ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ಐಜಿಪಿ ವಿಕಾಸ್‌ ಕುಮಾರ್ ಅವರನ್ನು ಹೊರತುಪಡಿಸಿ, ನಾಲ್ವರು ಪೊಲೀಸ್‌ ಅಧಿಕಾರಿಗಳ(police oficers) ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.

ವಿಕಾಸ್‌ ಕುಮಾರ್ ಅವರ ಅಮಾನತು ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿತ್ತು. ಅರ್ಜಿದಾರರನ್ನು ಪುನಃ ಕರ್ತವ್ಯಕ್ಕೆ ನಿಯೋಜಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಪ್ರಕರಣ ಹೈಕೋರ್ಟ್‌ನಲ್ಲಿ ಇರುವ ಕಾರಣ ಐಜಿಪಿ ವಿಕಾಸ್‌ ಕುಮಾರ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿಲ್ಲ.

Related Articles

Leave a Reply

Your email address will not be published. Required fields are marked *