BREAKING NEWSCITY CRIME NEWSDHARWADHubballi

ತಲ್ವಾರ್ ಇಟ್ಟವನ ಅಟ್ಟಾಡಿಸಿ ಬಂದಿಸಿದ ಪೊಲೀಸರು!

M R DAKHANI

POWER CITYNEWS: HUBLI

ಹುಬ್ಬಳ್ಳಿ :ಹುಬ್ಬಳ್ಳಿಯ ಅಮರಗೋಳ ಎಪಿಎಂಸಿ ಯಾರ್ಡ್ ನಲ್ಲಿ ಟಾಟಾ ಇಂಟ್ರಾ ಗೂಡ್ಸ್ ವಾಹನ ದಲ್ಲಿ ಮಾರಕಾಸ್ತ್ರವನ್ನು ಇಟ್ಟುಕೊಂಡು ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಪಿಐ ಸಮಿವುಲ್ಲಾ ಕೆ. ರವರ ನೇತೃತ್ವದ ಸಿಬ್ಬಂದಿಗಳನ್ನು ಒಳಗೊಂಡ ತಂಡವು ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ವಾಹನದಲ್ಲಿ ಎರಡು ಫುಟ್ ಉದ್ಧದ ತಲವಾರ್ ಕಂಡುಬಂದಿದ್ದು, ಮಾರಕಾಸ್ತ್ರವನ್ನು ವಶಪಡಿಸಿಕೊಂಡು, ಆರೋಪಿಯನ್ನ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ ಎಂದು ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಅವರು ತಿಳಿಸಿದ್ದಾರೆ.

ಬಂಧಿತನನ್ನು ತಿಪ್ಪಣ್ಣ ತಂದೆ ಭೀಮಪ್ಪ ಶಿಶನಳ್ಳಿ. ಸಾ- ರಾಯಪುರ, ಧಾರವಾಡ. (25) ಎಂದು ಗುರುತಿಸಿಲಾಗಿದೆ.

ಹುಬ್ಬಳ್ಳಿ ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಭಂಗ ಮಾಡುವ/ ಸಾರ್ವಜನಿಕರಿಗೆ ಭೀತಿ ಉಂಟುಮಾಡುವ ಉದ್ದೇಶದಿಂದ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತಿರುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು.

APMC ನವನಗರ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡದ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *