Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

90 ಲಕ್ಷದ ಕಾಮಗಾರಿಗೆ ಚಾಲನೆ ನೀಡಿದ ಕೇಂದ್ರ ಸಚಿವರು

ಧಾರವಾಡ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುದಾನದಲ್ಲಿ, ಎತ್ತಿನ ಗುಡ್ಡ ರಸ್ತೆಯ ತುರುಮರಿ ಗಾರ್ಡನ್ ನಲ್ಲಿ ಅಂದಾಜು 90 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಹಾಗೂ ರಸ್ತೆ ಕಾಮಗಾರಿಗಳಿಗೆ ಮಾನ್ಯ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ಸಚಿವರಾದ ಪ್ರಹ್ಲಾದ ಜೋಷಿ ರವರು ಭೂಮಿ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಮೃತ ದೇಸಾಯಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರ ಕೋರಿಕೆಯ ಮೇರೆಗೆ ಹಮ್ಮಿಕೊಂಡ ಈ ಯೋಜನೆಯಿಂದ ಈ ಭಾಗದ ನಾಗರಿಕರಿಗೆ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತವನಪ್ಪ ಅಷ್ಟಗಿ,ಸೀಮಾ ಮಸೂತಿ, ಪ್ರಕಾಶ ತುರಮರಿ,ಸುನೀಲ್ ಮೊರೆ, ಸೊರವ್ವಾ ಪಾಟೀಲ, ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *