Jannah Theme License is not validated, Go to the theme options page to validate the license, You need a single license for each domain name.
CITY CRIME NEWSHubballisoldiers

ಹುಣಸೂರಿನಲ್ಲಿ ದಾರುಣ ಘಟನೆ: ಹೆಂಡತಿ ಹಾಗೂ ಇಬ್ಬರುಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ..!

CRIME NEWS

POWER CITYNEWS :BANGALORE/HUBBALLI;ಹುಣಸೂರು, ಜು. 21: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ನ್ಯೂ ಮಾರುತಿ(newmaruti) ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು(chidrens) ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ನಿಶ್ಚಿತಾ (35),(nishchita) ಒಂದನೇ ತರಗತಿ(1ststd) ಹಾಗೂ ಏಳನೇ ತರಗತಿಯಲ್ಲಿ(7thstd) ವ್ಯಾಸಂಗ ಮಾಡುತ್ತಿದ್ದ ಇಬ್ಬರು ಮಕ್ಕಳು ಹಾಗೂ ಪತಿ ಹರೀಶ್ (40)(harish) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಹರೀಶ್ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಮನೆಯ ಮೇಲ್ಭಾಗದ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು(hangingsucide) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಭೀಕರ ಕೃತ್ಯಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Related Articles

Leave a Reply

Your email address will not be published. Required fields are marked *