
Vande Bharat train extension from Bengaluru to Belgaum!
POWER CITY NEWS :BANGALURUಬೆಂಗಳೂರು-ಬೆಳಗಾವಿ ನಡುವೆ ಹೊಸದಾಗಿ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಯೋಜಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರು ಆಹಾರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲನ್ನು ಬೆಳಗಾವಿಯರೆಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ,ಜೋಶಿ ಅವರು ಕೇಂದ್ರ ರೈಲು ಸಚಿವ ವೈಷ್ಣವ್ ಅವರಿಗೆ ಫೆಬ್ರುವರಿಯಲ್ಲಿ ಪತ್ರ ಬರೆದಿದ್ದರು.ಈ ರೈಲು ಬೆಳಗಾವಿಯಿಂದ ಬೆಳಿಗ್ಗೆ ಹೊರಡಲಿದೆ’ ಎಂದು ಸಚಿವ ವೈಷ್ಣವ್ ತಿಳಿಸಿದ್ದಾರೆ.ಈ ಮಾಹಿತಿಯನ್ನು ಕೇಂದ್ರದ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲಾದ್ ಜೋಶಿ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲಿಗೆ ನನ್ನ ಕೋರಿಕೆಯ ಮೇರೆಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರಿಗೆ ಹೃತ್ತೂರ್ವಕ ಕೃತಜ್ಞತೆಗಳು ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.