BREAKING NEWSರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ಫೆ. 7 ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಯಲ್ಲಿ ಉಪರಾಷ್ಟ್ರಪತಿಗಳ ಪ್ರವಾಸ!

POWER CITY NEWS :HUBLIಧಾರವಾಡ: ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ್ ಅವರು ಫೆಬ್ರವರಿ 7 ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ 7 ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರದಲ್ಲಿ ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ಕರ್ನಾಟಕ ವೈಭವದ ಸಾಹಿತ್ಯ ಮತ್ತು ಸಂಸ್ಕøತಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಉದ್ಘಾಟಿಸಲಿದ್ದಾರೆ. ಫೆಬ್ರವರಿ 7 ರಂದು ಬೆಳಿಗ್ಗೆ ನವದೆಹಲಿಯಿಂದ ಹೊರಡುವ ಉಪರಾಷ್ಟ್ರಪತಿಗಳು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ನಂತರ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಾಣಿಬೆನ್ನೂರಗೆ ತೆರಳುತ್ತಾರೆ. ಕಾರ್ಯಕ್ರಮದ ನಂತರ ಅವರು ಮಧ್ಯಾಹ್ನ ರಾಣಿಬೆನ್ನೂರನಿಂದ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ಮರುಪ್ರಯಾಣ ಬೆಳಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
