BREAKING NEWS

ಯೋಗ ರತ್ನ ಪ್ರಶಸ್ತಿಗೆ ಸಾಕ್ಷಿಯಾದ ಭವ್ಯ ವೇದಿಕೆ!

ಎಮ್ ಆರ್ ದಖನಿ

POWER CITYNEWS : HUBBALLI/BELLARY

ಹುಬ್ಬಳ್ಳಿ/ಬಳ್ಳಾರಿ ಜೂ 20: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಸಹಯೋಗದಲ್ಲಿ ಇಲ್ಲಿನ ಜೆಎಸ್‌ಡಬ್ಲ್ಯೂ ಟೌನ್ ಶಿಪ್ ನಲ್ಲಿ “ಯೋಗರತ್ನ ಪ್ರಶಸ್ತಿ” ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ 50 ಮಂದಿ ಸಿದ್ದಗುರುಗಳು ಒಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಯೋಗರಾಮಯ್ಯ ಮತ್ತು ಕರ್ಮಯೋಗಿರಾಮಯ್ಯ” ಎಂದು ಪ್ರಶಂಶಿಸಿ ಅಭಿನಂದಿಸಿದರು. ಐವತ್ತಕ್ಕೂ ಹೆಚ್ಚು ಶ್ರಮಿಕ ಸಮುದಾಯಗಳ ನಡುವೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ 50 ಮಂದಿ ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರವಾದ ಕಾಳಜಿ, ಸಾಮಾಜಿಕ ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಆಶೀರ್ವದಿಸಿದರು.

ಸಮಾರಂಭದಲ್ಲಿ ಶ್ವಾಸಯೋಗ ಪೀಠದ ಯೋಗ ಗುರು ಶ್ರೀ ವಚನಾನಂದ ಸ್ವಾಮೀಜಿ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌, ಸಂಸದರಾದ ಎಚ್‌ ತುಕಾರಾಂ, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌, ಸೇರಿದಂತೆ ಐವತ್ತಕ್ಕೂ ಹೆಚ್ಚಿನ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.ಇದೇ ವೇಳೆ ಯೋಗದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿದ ಗಣ್ಯರಿಗೆ ಯೋಗರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂತರ ಅಂತರರಾಷ್ಟ್ರೀಯ ಖ್ಯಾತಿಯ ಫ್ಯಾಷನ್ ಗುರು ಶ್ರೀ ಪ್ರಸಾದ್ ಬಿದ್ದಪ್ಪ ಅವರ ತಂಡದ ರೂಪದರ್ಶಿಗಳಿಂದ ಭಾರತದ ಭವ್ಯ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಬಿಂಬಿಸುವ ಫ್ಯಾಷನ್ ಶೋ ಹಮ್ಮಿಕೊಳ್ಳಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button